* ಉತ್ತರಾಖಂಡ ಸರಕಾರವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿತ್ತು. ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು 192 ಪುಟಗಳ ವಿಧೇಯಕವನ್ನು ಮಾಡಿಸಲಾಯಿತು.  * ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಉತ್ತರಾಖಂಡ ಭಾರತದ ಶಾಸಕಾಂಗ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. * ಮಸೂದೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, " ಮದುವೆ, ಜೀವನಾಂಶ, ಉತ್ತರಾಧಿಕಾರ ಮತ್ತು ವಿಚ್ಛೇದನದಂತಹ ವಿಷಯಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಯುಸಿಸಿ ಎಲ್ಲರಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ ಎಂದು ಹೇಳಿದರು.* ಮುಖ್ಯವಾಗಿ ಮಹಿಳೆಯರ ವಿರುದ್ಧದ ತಾರತಮ್ಯವನ್ನು ತೆಗೆದುಹಾಕುತ್ತದೆ. ಮಹಿಳೆಯರ ವಿರುದ್ಧ ಅನ್ಯಾಯ ಮತ್ತು ತಪ್ಪು ಕಾರ್ಯಗಳನ್ನು ನಿರ್ಮೂಲನೆ ಮಾಡಲು ಸಹಾಯ ಮಾಡುತ್ತದೆ. ‘ಮಾತೃಶಕ್ತಿ’ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಸಮಯ ಬಂದಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಮೇಲಿನ ತಾರತಮ್ಯ ನಿಲ್ಲಬೇಕು ಎಂದರು."