* ವೈದ್ಯಕೀಯ ಸಾಧನಗಳ ಉದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ 'ಭಾರತ ಸರಕಾರವು ನೂತನ ಉಪಕ್ರಮವನ್ನು ಆರಂಭಿಸಿದೆ.* ವೈದ್ಯಕೀಯ ಸಾಧನಗಳ ತಯಾರಿಕೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಈ ಉಪಕ್ರಮ ನೆರವಾಗಲಿದೆ. ಪ್ರೊಡಕ್ಷನ್ ಲಿಂಗ್ಸ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಉದ್ಯಮದಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಈ ಉಪಕ್ರಮಕ್ಕೆ ಪೂರಕವಾಗಲಿದೆ.* ಕೇಂದ್ರ ಸರಕಾರವು 500 ಕೋಟಿ ರೂಪಾಯಿ ಬಜೆಟ್ ಮೀಸಲಿಡಲಾಗಿದೆ. ಸ್ವದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ.* ಈ ಯೋಜನೆಯು ಹೂಡಿಕೆ ಮತ್ತು ನಾವೀನ್ಯತೆಯನ್ನು ಆಕರ್ಷಿಸುವ ಗುರಿ ಹೊಂದಿದೆ. ಸ್ಥಳೀಯ ಉತ್ಪಾದನಾ ಸಾಮರ್ಥ್ಯಗಳನ್ನು ಬಲಪಡಿಸುವ ಮೂಲಕ, ಭಾರತವು ಜಾಗತಿಕ ಸ್ಪರ್ಧಾತ್ಮಕತೆ ಹೆಚ್ಚಿಸಲು ನೆರವಾಗುತ್ತದೆ* ವೈದ್ಯಕೀಯ ಕ್ಷೇತ್ರವನ್ನು ಬೆಂಬಲಿಸಲು ನೂತನ ಯೋಜನೆಗಳನ್ನು ರೂಪಿಸುವುದು ಆರೋಗ್ಯ ಸೇವೆಗಳ ಗುಣಮಟ್ಟವನ್ನು ಸುಧಾರಿಸಲು ಮತ್ತು ಜನರಿಗೆ ಉತ್ತಮ ಸೇವೆಯನ್ನು ಒದಗಿಸಲು ಅತ್ಯಂತ ಮಹತ್ವಪೂರ್ಣವಾಗಿದೆ.