* ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಭರ್ಜರಿ ಶತಕ ಸಿಡಿಸಿದ್ದಾರೆ. * ಆಸ್ಟ್ರೇಲಿಯಾ ಭಾರತಕ್ಕೆ 413 ರನ್ಗಳ ಗುರಿಯನ್ನು ನೀಡಿದ್ದು ಮಂಧಾನಾ ಬ್ಯಾಟಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡಿದರು.* ಈ ಪಂದ್ಯದಲ್ಲಿ ಸ್ಮೃತಿ ಮಂಧಾನಾ ಕೇವಲ 50 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಅವರ ವೇಗದ ಏಕದಿನ ಶತಕದ ದಾಖಲೆಯನ್ನು ಮುರಿದರು. * ಈ ಹಿಂದೆ ಭಾರತದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ, 2012-13ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 52 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಒಂದು ದಶಕಕ್ಕೂ ಹೆಚ್ಚು ಕಾಲ ಈ ದಾಖಲೆಯನ್ನು ಹೊಂದಿದ್ದರು.* ಏಕದಿನ ಕ್ರಿಕೆಟ್ನಲ್ಲಿ ವೇಗದ ಶತಕ ಸಿಡಿಸಿದ ಬ್ಯಾಟರ್ಗಳು- ಸ್ಮೃತಿ ಮಂಧಾನ vs ಆಸ್ಟ್ರೇಲಿಯಾ 50 ಎಸೆತಗಳು (2025)- ವಿರಾಟ್ ಕೊಹ್ಲಿ vs ಆಸ್ಟ್ರೇಲಿಯಾ 52 ಎಸೆತಗಳು (2013)- ವೀರೇಂದ್ರ ಸೆಹ್ವಾಗ್ vs ನ್ಯೂಜಿಲೆಂಡ್ 60 ಎಸೆತಗಳು (2009)- ವಿರಾಟ್ ಕೊಹ್ಲಿ vs ಆಸ್ಟ್ರೇಲಿಯಾ 61 ಎಸೆತಗಳು (2013)- ಮೊಹಮ್ಮದ್ ಅಜರುದ್ದೀನ್ vs ನ್ಯೂಜಿಲೆಂಡ್ 62 ಎಸೆತಗಳು (1988)* ಮಹಿಳಾ ಏಕದಿನ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕ ಎಂಬ ಹೆಗ್ಗಳಿಕೆಗೆ ಮಂಧಾನ ಅವರ ಶತಕ ಪಾತ್ರವಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ 45 ಎಸೆತಗಳಲ್ಲಿ ಶತಕ ಬಾರಿಸಿದ ನಂತರ ಎರಡನೇ ಸ್ಥಾನದಲ್ಲಿದ್ದಾರೆ.* ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕಗಳು15 - ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ)13 - ಸ್ಮೃತಿ ಮಂಧಾನ (ಭಾರತ)13 - ಸೂಸಿ ಬೇಟ್ಸ್ (ನ್ಯೂಜಿಲೆಂಡ್)12 - ಟಾಮಿ ಬ್ಯೂಮಾಂಟ್ (ಇಂಗ್ಲೆಂಡ್)