* ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. * 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಕೈಗಾರಿಕೆ ಹಾಗೂ ದೇಶೀಯ ವ್ಯಾಪಾರ ಉತ್ತೇಜನಾ ಇಲಾಖೆಯು ಅಂಕಿ -ಅಂಶ ಬಿಡುಗಡೆ ಮಾಡಿದೆ. * ಕರ್ನಾಟಕ 2ನೇ ಸ್ಥಾನದಲ್ಲಿದ್ದರೂ, ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಆಗಿರುವ ಹೂಡಿಕೆಯನ್ನು ಗಮನಿಸಿದರೆ 3 ಪಟ್ಟುಗೂ ಕಡಿಮೆ ಹೂಡಿಕೆ ಕರ್ನಾಟಕದಲ್ಲಿ ಆಗಿದೆ. * ಮೊದಲ ತ್ರೈಮಾಸಿಕ ಅವಧಿಯಲ್ಲಿ ದೇಶಕ್ಕೆ ಬಂದಿರುವ ಒಟ್ಟಾರೆ ಎಫ್ ಡಿಐ ಪೈಕಿ ಶೇ.52ರಷ್ಟು ಮಹಾರಾಷ್ಟ್ರಕ್ಕೇ ಹೋಗಿದೆ.* ಉಳಿದಂತೆ 10788 ಕೋಟಿ ರು.ಗಳೊಂದಿಗೆ ದೆಹಲಿ 3ನೇ ಸ್ಥಾನದಲ್ಲಿದೆ. 9023 ಕೋಟಿ ರು.ಗಳೊಂದಿಗೆ ತೆಲಂಗಾಣ, 8508 ಕೋಟಿ ರು. ಹೂಡಿಕೆಯೊಂದಿಗೆ ಗುಜರಾತ್‌ ಕ್ರಮವಾಗಿ 4 ಹಾಗೂ 5ನೇ ಸ್ಥಾನವನ್ನು ಪಡೆದಿವೆ. ಈ ವರ್ಷದ ಏಪ್ರಿಲ್‌- ಜೂನ್‌ ಅವಧಿಯಲ್ಲಿ ಆಗಿರುವ ಹೂಡಿಕೆ ಇದಾಗಿದೆ.* ರಾಜ್ಯ ಹೂಡಿಕೆ ಮೊತ್ತ (ಕೋಟಿ ₹ಗಳಲ್ಲಿ) 1. ಮಹಾರಾಷ್ಟ್ರ 70795 2. ಕರ್ನಾಟಕ 19059 3. ದೆಹಲಿ. 10788 4. ತೆಲಂಗಾಣ 9023 5. ಗುಜರಾತ್ 8508 6. ತಮಿಳುನಾಡು 5818