* ಪರಿಷತ್ ಸದಸ್ಯ ಬಿಜೆಪಿಯ ರವಿಕುಮಾರ್ ಎನ್. ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.* ಸೋಮವಾರ(ಮಾರ್ಚ್ 03) ಈ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಅವರನ್ನು ಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಬೇಕೆಂದು ಮನವಿ ಮಾಡಿದ್ದಾರೆ.* ಆ ಸಂದರ್ಭದಲ್ಲಿ ರವಿಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.