* ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್ 3 ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.* ಸಾಹಿತಿಗಳು, ಬರಹಗಾರರು ಹಾಗೂ ವಿದ್ವಾಂಸರನ್ನು ವಿಧಾನ ಸೌಧದ ಹತ್ತಿರವಾಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ವಿಧಾನ ಸೌಧದ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.* ಪುಸ್ತಕ ಉತ್ಸವದಲ್ಲಿ ಶೇ. 80ರಷ್ಟು ಕನ್ನಡ ಹಾಗೂ ಶೇ. 20ರಷ್ಟು ಇತರ ಭಾಷೆಗಳ ಪುಸ್ತಕಗಳ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಸುಮಾರು 150ರಷ್ಟು ಮಳಿಗೆಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ.* ಉತ್ಸವದಲ್ಲಿ ಸಾಹಿತಿಗಳು ಬರೆದ ಪುಸ್ತಕ ಬಿಡುಗಡೆಗೆ ವೇದಿಕೆ ಕಲ್ಪಿಸುವ ಜತೆಗೆ ಅತ್ಯುತ್ತಮ ಸಾಹಿತಿಯೊಬ್ಬರಿಗೆ ಪ್ರಶಸ್ತಿ ನೀಡುವ ಬಗ್ಗೆಯೂ ನಿರ್ಧರಿಸಲಾಗಿದೆ. ಉತ್ಸವದಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಪೂರಕವಾಗಿ ತಲಾ 2ರಿಂದ 3 ಲಕ್ಷ ರೂ.ವರೆಗೆ ತಮ್ಮ ನಿಧಿಯಿಂದ ಪುಸ್ತಕ ಖರೀದಿಸಿ ಒದಗಿಸುವ ಕುರಿತಂತೆಯೂ ಕ್ರಮ ವಹಿಸಲಾಗುತ್ತಿದೆ. * ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯ ಶಾಲಾ ಕಾಲೇಜುಗಳಿಂದ ಬೇಡಿಕೆ ಪಟ್ಟಿ ಪಡೆದುಕೊಳ್ಳಲು ತಿಳಿಸಲಾಗುತ್ತಿದೆ. ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳನ್ನು ಖರೀದಿಸಿ ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ ಕಾಲೇಜುಗಳಿಗೆ ಒದಗಿಸಬಹುದು. ಈ ಬಗ್ಗೆ ಶಾಸಕರಿಗೆ ಪತ್ರ ಬರೆಯಲಾಗಿದೆ. * ಪುಸ್ತಕ ಉತ್ಸವದಲ್ಲಿ ಇತರ ಕಡೆಗಿಂತ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಪುಸ್ತಕ ಒದಗಿಸಲು ಪುಸ್ತಕ ಮಾರಾಟಗಾರರಿಗೆ ಸೂಚನೆ ನೀಡಲಾಗುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.