*  16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ (ಮೇ 22) ರಂದು ವಿಧಾನಸೌಧದಲ್ಲಿರುವ ವಿಧಾನಸಭೆ ಸಭಾಂಗಣದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಹಂಗಾಮಿ ಸ್ಪೀಕರ್ ಆಗಿ ಕಾಂಗ್ರೆಸ್ನ  ಆರ್.ವಿ ದೇಶಪಾಂಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.* ವಿಧಾನಸಭೆಯ ಸದನದಿಂದ ಸಭಾಧ್ಯಕ್ಷರು ಆಯ್ಕೆಯಾಗುವರೆಗೆ ವಿದಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಆರ್.ವಿ.ದೇಶಪಾಂಡೆ ರವರನ್ನು ಮೇ 22ರಿಂದ ಜಾರಿಗೆ ಬರುವಂತೆ ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ರವರು ತಿಳಿಸಿದ್ದಾರೆ.