* ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.* ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23 ರಂದು ಈ ಐತಿಹಾಸಿಕ ವಿಜಯಕ್ಕೆ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ.* ಕೇಂದ್ರ ಸರ್ಕಾರ (Central Government) ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಈ ಮೂಲಕ ರಾಣಿ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.* ನಾಲ್ಕೈದು ದಿನಗಳ ಹಿಂದಷ್ಟೇ ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ತ್ವರಿತ ನಿರ್ಣಯ ಕೈಗೊಂಡಿದ್ದು, ಬ್ರಿಟಿಷ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಐತಿಹಾಸಿಕ ದಿನದಂದೇ ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.