* ಜಪಾನ್, ಜರ್ಮನಿಗಳು ಮಾತ್ರವಲ್ಲದೆ ಅಮೆರಿಕವನ್ನೂ ಹಿಂದಿಕ್ಕಿ ಭಾರತವು ಜು.11- ಮುಂಬರುವ 2075ರ ವೇಳೆಗೆ 1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತ ವಿಶ್ವದ ಎರಡನೆ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಎಂದು ಗೋಲ್ಡ್‍ಮನ್ ಸ್ಯಾಚ್ಸ್ ಸಂಶೋಧನಾ ವರದಿಯು ತಿಳಿಸಿದೆ.* ಪ್ರಸ್ತುತ, ಭಾರತವು ಜರ್ಮನಿ, ಜಪಾನ್, ಚೀನಾ ಮತ್ತು ಯುಎಸ್ ನಂತರ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. * ನಾವೀನ್ಯತೆ ಮತ್ತು ತಂತ್ರಜ್ಞಾನ, ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಹೆಚ್ಚುತ್ತಿರುವ ಕಾರ್ಮಿಕರ ಉತ್ಪಾದಕತೆಯು ಮುಂಬರುವ ವರ್ಷಗಳಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆಗೆ ಸಹಾಯ ಮಾಡಲಿದೆ ಎಂದು ಗೋಲ್ಡ್ಮನ್ ಸ್ಯಾಚ್ಸ್ ತಿಳಿಸಿದೆ.