* RBI ಗವರ್ನರ್ ಶಕ್ತಿಕಾಂತ ದಾಸ್ ಅವರು ಗ್ಲೋಬಲ್ ಫೈನಾನ್ಸ್‌ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ್ದಾರೆ.* ಅಮೆರಿಕ ಮೂಲದ ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್‌ ಪ್ರಕಾರ ಮೂರು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಪಟ್ಟಿಯಲ್ಲಿ ಶಕ್ತಿಕಾಂತ ದಾಸ್ ಅವರು ಅಗ್ರಸ್ಥಾನದಲ್ಲಿದ್ದಾರೆ.* ಶಕ್ತಿಕಾಂತ ದಾಸ್ ನಂತರ, ಸ್ವಿಟ್ಜರ್ಲೆಂಡ್ ಗವರ್ನರ್ ಥಾಮಸ್ ಜೆ ಜೋರ್ಡಾನ್ ಮತ್ತು ವಿಯೆಟ್ನಾಂನ ಕೇಂದ್ರ ಬ್ಯಾಂಕ್ ಮುಖ್ಯಸ್ಥ ನ್ಗುಯೆನ್ ಥಿ ಹಾಂಗ್ ಅವರು ಕ್ರಮವಾಗಿ ನಂತರದ ಎರಡು ಸ್ಥಾನಗಳಲ್ಲಿದ್ದಾರೆ. * ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ ದಾಸ್ ಅವರು ಅಮೆರಿಕ ಮೂಲದ ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್‌ನಿಂದ ಜಾಗತಿಕವಾಗಿ ಉನ್ನತ ಕೇಂದ್ರೀಯ ಬ್ಯಾಂಕರ್ ಆಗಿ ಸ್ಥಾನ ಪಡೆದಿದ್ದಾರೆ.* ದೇಶದ ಸೆಂಟ್ರಲ್ ಬ್ಯಾಂಕ್‌ನ ಶಕ್ತಿಕಾಂತ ದಾಸ್ ಅವರ ನಾಯಕತ್ವವು ಇತ್ತೀಚಿನ ಪರೀಕ್ಷೆಗಳು ಮತ್ತು ಸವಾಲುಗಳನ್ನು ತಡೆದುಕೊಡಿದೆ ಎಂದು ನಿರ್ಮಲಾ ಸೀತಾರಾಮನ್ ಎಂದು ತಿಳಿಸಿದ್ದಾರೆ.