* 2023 ಅಕ್ಟೋಬರ್ 05ರಿಂದ ಭಾರತದಲ್ಲಿ ಆರಂಭವಾಗಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಇದೀಗ 15 ಆಟಗಾರರನ್ನೊಳಗೊಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಪ್ಯಾಟ್ ಕಮಿನ್ಸ್‌ ನಾಯಕನಾಗಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.*  ಆಸ್ಟ್ರೇಲಿಯಾ ಕ್ರಿಕೆಟ್ ತಂಡ 5 ಬಾರಿಯ ಚಾಂಪಿಯನ್ ಆಗಿದೆ ಇದೀಗ 6ನೇ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿ ಗೆಲ್ಲಲು ಹಾತೊರೆಯುತ್ತಿದೆ. * ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಆಸ್ಟ್ರೇಲಿಯಾ ತಂಡ : ಪ್ಯಾಟ್ ಕಮಿನ್ಸ್ ನಾಯಕತ್ವದ ತಂಡದಲ್ಲಿ ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಶ್, ಶಾನ್ ಅಬ್ಬೋಟ್, ಆಸ್ಟನ್ ಏಗಾರ್, ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಶ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆಡಂ ಜಂಪಾ, ಮಿಚೆಲ್ ಸ್ಟಾರ್ಕ್ ತಂಡದಲ್ಲಿದಾರೆ.*  2023ರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾ ತಂಡವು ಅಕ್ಟೋಬರ್ 08ರಂದು ಚೆನ್ನೈನಲ್ಲಿ ಆತಿಥೇಯ ಭಾರತ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.