* ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರು ಸೆಪ್ಟೆಂಬರ್ 22 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯವನ್ನು ಉಲ್ಲೇಖಿಸಿದ್ದಾರೆ.* ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ 'ಭಾರತ– ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ ವಿಷಯವೇ ನಿರ್ಣಾಯಕವಾದುದು' ಎಂದು ಪ್ರತಿಪಾದಿಸಿದ್ದಾರೆ.* 370 ನೇ ವಿಧಿಯನ್ನು ರದ್ದುಗೊಳಿಸುವುದು ತನ್ನ ಆಂತರಿಕ ವಿಷಯ ಎಂದು ಭಾರತವು ಅಂತರರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿದ್ದು, ವಾಸ್ತವವನ್ನು ಒಪ್ಪಿಕೊಂಡು ಭಾರತ ವಿರೋಧಿ ಪ್ರಚಾರವನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.* ವಿಶ್ವಸಂಸ್ಥೆ ಸಾಮಾನ್ಯ ಸಭೆಯ 78ನೇ ಅಧಿವೇಶನ ಉದ್ದೇಶಿಸಿ ಮಾತನಾಡಿದ ಕಾಕ‌ ಅವರು, 'ಭಾರತ ಸೇರಿದಂತೆ ತನ್ನ ನೆರೆಯ ರಾಷ್ಟ್ರಗಳ ಜೊತೆಗೆ ಶಾಂತಿಯುತ ಮತ್ತು ಫಲಪ್ರದವಾದ ಬಾಂಧವ್ಯವನ್ನು ಹೊಂದಲು ಬಯಸುತ್ತದೆ' ಎಂದು ತಿಳಿಸಿದ್ದಾರೆ.