* ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ರಾಜಕೀಯ ನಾಯಕರನ್ನು ವಿವಾದಕ್ಕೆ ಸಿಲುಕಿಸಿರುವ ವಿವಾದಿತ 'ಮಹಾದೇವ್ ಬುಕ್' ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.* ನವೆಂಬರ್ 5 ರಂದು ಹೊರಡಿಸಿದ ಆದೇಶದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮಹದೇವ್ ಬುಕ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ.* ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯದ (ಇಡಿ) ಶಿಫಾರಸಿನ ಮೇರೆಗೆ ಸಚಿವಾಲಯ ಈ ಕ್ರಮ ಕೈಗೊಂಡಿದೆ.* ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರಿಗೆ ಮಹದೇವ್ ಆ್ಯಪ್ ಪ್ರವರ್ತಕರಾದ ರವಿ ಉಪ್ಪಳ್‌ ಮತ್ತು ಸೌರಭ್‌ ಚಂದ್ರಕರ್‌ ಅವರು ಯುಎಇಯಿಂದ ನಗದು ಕೊರಿಯರ್‌ ಮೂಲಕ ರೂ. 508 ಕೋಟಿ ಕಳಿಸಿದರೆಂದು ನವೆಂಬರ್ 03 ರಂದು ಜಾರಿ ನಿರ್ದೇಶನಾಲಯದ (ಇಡಿ) ಆರೋಪಿಸಿತ್ತು.* ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ವೆಬ್‌ಸೈಟ್ ಅನ್ನು ಮುಚ್ಚಲು ಶಿಫಾರಸು ಮಾಡುವ ಸಂಪೂರ್ಣ ಹಕ್ಕು ಛತ್ತೀಸ್‌ಗಢ ಸರ್ಕಾರಕ್ಕೆ ಇದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿಳಿಸಿದ್ದಾರೆ.