* ಭಾರತ ಮೂಲದ ಸುಹಾಸ್ ಸುಬ್ರಹ್ಮಣ್ಯಂ ಅವರು ಅಮೆರಿಕದ ವರ್ಜೀನಿಯಾದ 10ನೇ ಕಾಂಗ್ರೆಷನಲ್ ಡಿಸ್ಟಿಕ್ಟ್ ಆಯ್ಕೆಯಾಗುವ ಮೂಲಕ ಇತಿಹಾಸ ಬರೆದಿದ್ದಾರೆ. ಇಡೀ ಪೂರ್ವ ಕರಾವಳಿಯಿಂದ ಚುನಾಯಿತರಾದ ಮೊದಲ ಭಾರತೀಯ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.*  ಡೆಮಾಕ್ರಟಿಕ್ ಭದ್ರಕೋಟೆಯಾದ [ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾದ ಅವರು]    ವರ್ಜೀನಿಯಾ ಮತ್ತು ಇಡೀ ಪೂರ್ವ ಕರಾವಳಿ ಭಾಗದಿಂದ ಚುನಾಯಿತರಾದ ಮೊದಲ ಭಾರತೀಯ ಮೂಲದ ಅಮೆರಿಕನ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.* ರಿಪಬ್ಲಿಕನ್ ಪಕ್ಷದ ಮೈಕ್ ಕ್ಲಾನ್ಸಿ ಅವರನ್ನು ಸೋಲಿಸುವ ಮೂಲಕ ಹೊಸ ದಾಖಲೆಯನ್ನು ಸುಹಾಸ್ ಸುಬ್ರಮಣ್ಯಂ ಬರೆದಿದ್ದಾರೆ. ಈಗ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅಧ್ಯಕ್ಷರಾಗದಿದ್ದರೂ ಆ ಪಕ್ಷದ ಅಭ್ಯರ್ಥಿ ಗೆಲುವು ಕಂಡಿದ್ದಾರೆ.* ನನ್ನ ಮೇಲೆ ನಂಬಿಕೆ ಇಟ್ಟಿರುವ ವರ್ಜೀನಿಯಾದ 10ನೇ ಕಾಂಗ್ರೆಷನಲ್ ಡಿಸ್ಟ್ರಿಕ್ಟ್ ನ ಜನರಿಗೆ ನನ್ನ ಅಭಿನಂದನೆ. ಇಲ್ಲಿನ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳು ನಮ್ಮ ಕುಟುಂಬಕ್ಕೆ ವೈಯಕ್ತಿಕವಾದವುಗಳು. ಈ ಜಿಲ್ಲೆಗೆ ಸೇವೆ ಸಲ್ಲಿಸಲು ನನಗೆ ಸಿಕ್ಕ ಸದಾವಕಾಶ ಇದಾಗಿದೆ. ನನ್ನ ಪೋಷಕರು 70ರ ದಶಕದಲ್ಲಿ ಅಮೆರಿಕಾಗೆ ಬಂದಿದ್ದಾರೆ. ನನ್ನ ತಾಯಿ ಬೆಂಗಳೂರಿನವರು, ಮತ್ತು ನನ್ನ ತಂದೆ ಚೆನ್ನೈನವರು. ಅವರು ಸಿಕಂದರಾಬಾದ್‌ನಲ್ಲಿದ್ದರು. ಆ ಬಳಿಕ ಅಮೆರಿಕಗೆ ಬಂದು ನೆಲೆಸಿದ್ದಾರೆ ಎಂದು ಎಂದು ಸುಬ್ರಹ್ಮಣ್ಯಂ ಹೇಳಿದ್ದಾರೆ.* ಪ್ರಸ್ತುತ ಅಮಿ ಬೇರಾ, ರಾಜಾ ಕೃಷ್ಣಮೂರ್ತಿ, ರೋ ಖನ್ನಾ, ಪ್ರಮೀಳಾ ಜಯಪಾಲ್ ಮತ್ತು ಶ್ರೀ ಥಾನೇದಾರ್ ಸೇರಿ ಐವರು ಭಾರತೀಯ ಅಮೆರಿಕನ್ನರನ್ನು ಒಳಗೊಂಡಿರುವ ಕಾಂಗ್ರೆಸ್‌ನ ಸಮೋಸಾ ಕಾಕಸ್‌ಗೆ ಸುಬ್ರಹ್ಮಣ್ಯಂ ಸೇರ್ಪಡೆಯಾಗಿದ್ದಾರೆ.* ಅಸ್ತಿತ್ವದಲ್ಲಿರುವ ಎಲ್ಲಾ ಐದು ಭಾರತೀಯ ಅಮೇರಿಕನ್ ಸದಸ್ಯರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಮರು ಆಯ್ಕೆಯಾದರು.* ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಮೂಲದ 6 ಜನರು ಆಯ್ಕೆಯಾಗಿದ್ದಾರೆ.  ಈಗಾಗಲೇ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರಿಗಂತ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮುನ್ನಡೆ ಪಡೆದಿದ್ದು, 2ನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಲಿದ್ದಾರೆ.