* ಇತರ ರಾಜ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 33 ವರ್ಷಕ್ಕೆ ಹೆಚ್ಚಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ.* ಶನಿವಾರ(ಜೂನ್ 14) ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಸಿಬ್ಬಂದಿ ಕೊರತೆಯ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರತಿಯೊಂದು ಠಾಣೆಯಲ್ಲಿಯೂ ಸಿಬ್ಬಂದಿ ಕೊರತೆ ಇರುವುದನ್ನು ಒಪ್ಪಿಕೊಂಡು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.* ಎಲ್ಲ ಜಾತಿ, ಧರ್ಮ ಮತ್ತು ಸಮುದಾಯದ ಸಣ್ಣ ಹಾಗೂ ದೊಡ್ಡ ಪ್ರಾರ್ಥನಾ ಮಂದಿರಗಳಿಗೆ ರಾತ್ರಿ ಬೆಳಕಿನ ವ್ಯವಸ್ಥೆ ಕಲ್ಪಿಸಿ, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಹಾಗೂ ಈ ಮಾಹಿತಿಯನ್ನು ಪ್ರತಿದಿನವೂ ಸಂಬಂಧಿತ ಠಾಣೆಗೆ ನೀಡುವಂತೆ ಗೃಹಸಚಿವರು ಸೂಚಿಸಿದರು.