* ತ್ರಿಲಯನ್ಸ್ ಖ್ಯಾತಿಯ ಇಂಗ್ಲೆಂಡ್ ಫುಟ್‌ಬಾಲ್ ತಂಡ ಪ್ರತಿಷ್ಠಿತ ಯುರೋಕಪ್ ಟೂರ್ನಿಯಲ್ಲಿ ಸತತ ಎರಡನೇ ಬಾರಿ ಫೈನಲ್‌ಗೇರುವ ಮೂಲಕ ಹೊಸ ಇತಿಹಾಸ ಬರೆದಿದೆ. * ಬದಲಿ ಆಟಗಾರ ಒಲಿ ವಾಟಿನ್ಸ್ ಅವರು ಇಂಜುರಿ ಸಮಯದಲ್ಲಿ ಬಾರಿಸಿದ ಗೋಲಿನಿಂದ ಇಂಗ್ಲೆಂಡ್ ತಂಡ ಸೆಮಿಫೈನಲ್‌ನಲ್ಲಿ ನೆದರ್ಲೆಂಡ್ ಎದುರು 2-1ರಿಂದ ಗೆಲುವು ದಾಖಲಿಸಿತು. * ಜುಲೈ 14 ರಂದು (ಭಾನುವಾರ) ನಡೆಯಲಿರುವ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಸ್ಪೇನ್-ಇಂಗ್ಲೆಂಡ್ ಮುಖಾಮುಖಿಯಾಗಲಿವೆ.* ಯುರೋ ಕಪ್ ಇತಿಹಾಸದಲ್ಲೇ ಇಂಗ್ಲೆಂಡ್ ತಂಡವು ಎರಡನೇ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. 2021 ರಲ್ಲಿ ಅಂತಿಮ ಸುತ್ತಿಗೆ ಪ್ರವೇಶಿಸಿದ್ದ ಆಂಗ್ಲರು ಈ ಬಾರಿಯಾದರೂ ಕಪ್ ಗೆಲ್ಲುವ ಹಂಬಲದಲ್ಲಿದ್ದಾರೆ. ಮತ್ತೊಂದೆಡೆ ಸ್ಪೇನ್ ಪಡೆಯು 12 ವರ್ಷಗಳ ಬಳಿಕ ಮತ್ತೊಮ್ಮೆ ಯುರೋ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ. * 18ನೇ ನಿಮಿಷದಲ್ಲಿ ಇಂಗ್ಲೆಂಡ್ ತಂಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿದೆ. ಈ ಪೆನಾಲ್ಟಿಯನ್ನು ಗೋಲಾಗಿಸುವಲ್ಲಿ ನಾಯಕ ಹ್ಯಾರಿ ಕೇನ್ ಯಶಸ್ವಿಯಾದರು. ಅದರಂತೆ ಮೊದಲಾರ್ಧವು 1-1 ಅಂತರದದಲ್ಲಿ ಕೊನೆಗೊಂಡಿತು.* ಮೊದಲ ಸೆಮಿಫೈನಲ್ನಲ್ಲಿ ಬಲಿಷ್ಠ ಫ್ರಾನ್ಸ್ ತಂಡವನ್ನು 2-1 ಅಂತರದಿಂದ ಮಣಿಸುವ ಮೂಲಕ ಸ್ಪೇನ್ ಪಡೆ ಫೈನಲ್ಗೆ ಹೆಜ್ಜೆ ಇಟ್ಟಿದ್ದು, ಅದರಂತೆ ಜುಲೈ 15 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸ್ಪೇನ್ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.* ಯುರೋ ಕಪ್ ಇತಿಹಾಸದಲ್ಲಿ ಸ್ಪೇನ್ ತಂಡವು 3 ಬಾರಿ ಮಾತ್ರ ಚಾಂಪಿಯನ್ ಪಟ್ಟ ಅಲಂಕರಿಸಿದೆ. 1964 ರಲ್ಲಿ ಚೊಚ್ಚಲ ಟ್ರೋಫಿ ಗೆದ್ದಿದ್ದ ಸ್ಪೇನ್ ಆ ಬಳಿಕ 2008 ಮತ್ತು 2012 ರಲ್ಲಿ ಯುರೋ ಕಪ್ ಗೆದ್ದುಕೊಂಡಿದೆ.