* ನಾಡಿಯಾ ಕ್ಯಾಲ್ವಿನೋ ಯುರೋಪಿಯನ್ ದೇಶ ಸ್ಪೇನ್‌ನ ಅರ್ಥಶಾಸ್ತ್ರಜ್ಞೆ. ಇವರ ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.  ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.* ನಾಡಿಯಾ ಅವರು ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ ನ 8 ನೇ ಅಧ್ಯಕ್ಷರಾಗಿದ್ದಾರೆ. ಈ ಬ್ಯಾಂಕ್ ನ ಅಧ್ಯಕ್ಷರಾಗಿ 2012 ರಿಂದ ಜರ್ಮನಿಯ ವರ್ನರ್ ಹೊಯೆರ್ ಅವರು ಕಾರ್ಯ ನಿರ್ವಹಿಸುತ್ತಿದ್ದರು.* ನಾಡಿಯಾ ಅವರು ಅಂತಾರಾಷ್ಟ್ರೀಯ ಹಣಕಾಸು ಮತ್ತು ಹಣಕಾಸು ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ.* ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ ಅನ್ನು 1958 ರಲ್ಲಿ ಸ್ಥಾಪಿಸಲಾಯಿತು. ಇದರ ಪ್ರಧಾನ ಕಛೇರಿ ಲಕ್ಸೆಂಬರ್ಗ್‌ನಲ್ಲಿದೆ.