Loading..!

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೇಮಕಾತಿ, ಈ ಕುರಿತು ಮಾಹಿತಿ ನಿಮಗಾಗಿ
| Date:June 6, 2019
not found
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಉಪ ಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರವಳಿಕೆ ತಜ್ಞರು - 2,
ಪ್ರಸೂತಿ ತಜ್ಞರು 2,
ಎಂಬಿಬಿಎಸ್ ವೈದ್ಯರು 1,
ನಗರ ಆರೋಗ್ಯ ವೈದ್ಯರು 1,
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು 4 + 19,
ಪ್ರಯೋಗಶಾಲಾ ತಂತ್ರಜ್ಞರು 1,
ಹುದ್ದೆಗಳಿಗೆ ವಿವಿಧ ಕಾರ್ಯಕ್ರಮಗಳಡಿ ವಿದ್ಯಾರ್ಹತೆ ಆಧರಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಜೂನ್ 12 ರಂದು ಬೆಳಗ್ಗೆ 10.30 ರಿಂದ 2 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಶ್ರೀರಾಮನಗರ ರಸ್ತೆ, ದಾವಣಗೆರೆ, ಎಸ್.ಎಸ್. ಆಸ್ಪತ್ರೆ ಹಿಂಭಾಗ, ಎಂಸಿಸಿ ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು.

ಅರ್ಜಿದಾರರು ಸೂಕ್ತ ಅರ್ಜಿಗಳನ್ನು ಪಡೆದು ಸ್ವಯಂ ದೃಢೀಕರಣ ವಿರುವ ವಿದ್ಯಾರ್ಹತೆ, ಮೀಸಲಾತಿ ಮತ್ತು ಅನುಭವಕ್ಕೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ಭಾವಚಿತ್ರದೊಂದಿಗೆ ಸ್ವಯಂ ಅಭ್ಯರ್ಥಿಯೇ ಹಾಜರಾಗಿ ಅದೇ ದಿನ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಹಿಂತಿರುಗಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಸರ್ಕಾರದ/ ಇಲಾಖೆಯ ನಿಯಮಾವಳಿಗಳಂತೆ ವಯೋಮಿತಿ ಮತ್ತು ಮೀಸಲಾತಿ ನಿಗದಿಪಡಿಸಲಾಗಿದೆ. ಯಾವುದೇ ಕಾರಣ ನೀಡದೆ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಪಡಿಸುವ ತೀರ್ಮಾನ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೆ ಇರುತ್ತದೆ. ಮಾಹಿತಿಯನ್ನು ಕಚೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ದೂರವಾಣಿ ಸಂಖ್ಯೆ 94498 43110, 94498 43195 ಸಂಪರ್ಕಿಸುವಂತೆ ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments