Loading..!

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿನ ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Nov. 26, 2025
Image not found

               ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ 2025 ರ HGML ಅಧಿಕೃತ ಅಧಿಸೂಚನೆಯ ಮೂಲಕ ಭದ್ರತಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ರಾಯಚೂರು - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು 06-ಡಿಸೆಂಬರ್-2025 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ಶೈಕ್ಷಣಿಕ ಅರ್ಹತೆ: HGML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಶಸ್ತ್ರ ದಳಗಳು ಅಥವಾ ಪ್ಯಾರ ಮಿಲಿಟರಿ ಸೇವೆಗಳು ಅಥವಾ ಪೊಲೀಸ್ ಸೇವೆಯಲ್ಲಿ ಕ್ಯಾಪ್ಟನ್ ಅಥವಾ ತತ್ಸಮಾನ ಹುದ್ದೆ ಹೊಂದಿರುವುದರ ಜೊತೆಗೆ 8 ವರ್ಷಗಳ ಅನುಭವ ಹೊಂದಿರಬೇಕು.


ಮಾಸಿಕ ವೇತನ : ತಿಂಗಳಿಗೆ ರೂ. 70.000/- ವರೆಗೆ ನಿಗದಿಪಡಿಸಲಾಗಿದೆ.  


ಆಯ್ಕೆ ಪ್ರಕ್ರಿಯೆ : ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 


ಸಂದರ್ಶನದ ವಿವರ  :
ದಿನಾಂಕ :
06.12.2025 ರಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆ
ಸ್ಥಳ : ಆಡಳಿತ ಕಛೇರಿ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, ಹಟ್ಟಿ-584 115


        ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ತಮ್ಮ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯನ್ನು ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಇತ್ಯಾದಿಗಳ ಮೂಲ ಮತ್ತು ಪ್ರತಿಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಜೊತೆಗೆ ಹಾಜರುಪಡಿಸಬೇಕು.


ಸೂಚನೆ: ನಿಗದಿತ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಿಲ್ಲದ ಅಭ್ಯರ್ಥಿಗಳು 10 ದಿನಗಳ ಒಳಗೆ ಅಗತ್ಯ ದಾಖಲೆ ಪತ್ರಗಳ ಜೊತೆಗೆ ತಮ್ಮ ವ್ಯಕ್ತಿಗತ ವಿವರಗಳನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್, ಹಟ್ಟಿ-584115 ಇವರಿಗೆ ಕಳುಹಿಸುವಂತೆ ಕೋರಿದೆ.

Comments