Loading..!

ಐಡಿಬಿಐ 600 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
| Date:July 4, 2019
not found
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ 'ಭಾರತೀಯ ಕೈಗಾರಿಕಾಭಿವೃದ್ಧಿ ಬ್ಯಾಂಕ್‌' (ಐಡಿಬಿಐ) ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ವಿಸ್ತರಿಸಿದೆ.

ಇದೀಗ ಅಭ್ಯರ್ಥಿಗಳು ಜುಲೈ 7ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಜುಲೈ 7 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆಯ ಲಿಂಕ್‌ ತಡವಾಗಿ ವೆಬ್‌ನಲ್ಲಿ ಲಭ್ಯವಾಗಿದ್ದರಿಂದ ಬ್ಯಾಂಕ್‌ ಅವಧಿ ವಿಸ್ತರಿಸುವ ತೀರ್ಮಾನ ತೆಗೆದುಕೊಂಡಿದೆ. ಅಧಿಸೂಚನೆಯಲ್ಲಿ ಜುಲೈ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದು ಪ್ರಕಟಿಸಲಾಗಿತ್ತು.

ಪರೀಕ್ಷಾ ದಿನಾಂಕವೂ ಬದಲು:
ಈ ಹುದ್ದೆಗೆ ಆನ್‌ಲೈನ್‌ ಪರೀಕ್ಷೆ ಮೂಲಕ ನೇಮಕ ನಡೆಯಲಿದ್ದು, ಜುಲೈ 21ರಂದು ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಿರುವುದರಿಂದ ಪರೀಕ್ಷೆಯನ್ನೂ ಒಂದು ವಾರಗಳ ಕಾಲ ಮುಂದೂಡಲಾಗಿದೆ. ಜುಲೈ 28ರಂದು ಈಗ ಪರೀಕ್ಷೆ ನಡೆಯಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ಈ ನೇಮಕಾತಿಯ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಿರಿ

ಸಹಾಯವಾಣಿ ಸಂಖ್ಯೆ:
022 6250 7741
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments