ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ (KPSC)ವು ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ 20/09/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ KPSC ಯು ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KPSC ಯು 06/09/2025 ಮತ್ತು 07/09/2025 ರಂದು ನಡೆಯಲಿರುವ ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ Hall Ticket (ಪ್ರವೇಶಪತ್ರ) ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ದಿನಾಂಕ 30/08/2025 ರಿಂದ ಪ್ರವೇಶಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹದಾಗಿದೆ.
* ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿರುವ ಸಮಯ:
ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಉಪಕೇಂದ್ರದ ಬಳಿ ಕಡ್ಡಾಯವಾಗಿ ಹಾಜರಿರತಕ್ಕದ್ದು. ಪರೀಕ್ಷೆಗೆ ಬೆಳಗಿನ ಅಧಿವೇಶನಕ್ಕೆ ಬೆಳಿಗ್ಗೆ 8.00ರ ಒಳಗೆ ಹಾಗೂ ಮಧ್ಯಾಹ್ನ 12:00 ಗಂಟೆಯೊಳಗೆ ಹಾಜರಿರಬೇಕು. ಬೆಳಗಿನ ಅಧಿವೇಶನಕ್ಕೆ 9:50ರ ನಂತರ ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 1.50 ರ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.
* ವಸ್ತ್ರ ಸಂಹಿತೆ :
ಅ) ತುಂಬು ತೋಳಿನ ಶರ್ಟ್/T.Shirt/Frills/ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
ಆ) ಯಾವುದೇ ರೀತಿಯ ಆಭರಣಗಳನ್ನು (Metal and Non metal) ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)
ಇ) ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
* ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:
ಅ) ಪರೀಕ್ಷೆಯ ಪ್ರವೇಶ ಪತ್ರ (Exam Admit Card)
ಆ) ಮೂಲ ಗುರುತಿನ ಚೀಟಿ (original Identification card), Passport, PAN CARD, Voter ID, Aadhar-U.I.D.,
ಇ) ಪಾಸ್‌ಪೋರ್ಟ್/ಸ್ಟ್ಯಾಂಪ್ ಅಳತೆಯ 2 ಭಾವ ಚಿತ್ರಗಳು (Photo).
ಈ) ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪಾತ್ರಗಳು.
Comments