ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಸ್ತುತ ವರ್ಷದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) 2025ಕ್ಕೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಪರೀಕ್ಷೆ ನವೆಂಬರ್ 2, 2025 ರಂದು ನಡೆಯಲಿದೆ. ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈಗ ವಿಷಯವಾರು ಪಠ್ಯಕ್ರಮವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
K-SET ಪರೀಕ್ಷೆಗೆ ಅರ್ಜಿ ಆಹ್ವಾನ ಈಗಾಗಲೇ ನೀಡಲಾಗಿದ್ದು, ಅಭ್ಯರ್ಥಿಗಳು ತಕ್ಷಣ ತಮ್ಮ ಪಠ್ಯಕ್ರಮವನ್ನು ಪರಿಶೀಲಿಸಿ ತಯಾರಿ ಪ್ರಾರಂಭಿಸಲು ಸಲಹೆ ನೀಡಲಾಗಿದೆ. ಪ್ರತಿ ವಿಷಯಕ್ಕೆ ಪ್ರತ್ಯೇಕವಾಗಿ ಸಿಲಬಸ್ ಲಿಂಕ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.
ಆಧಿಸೂಚನೆ ಮತ್ತು ಪ್ರಸ್ತುತ ಪರಿಸ್ಥಿತಿ :
- ಕೆಸೆಟ್ ಅಧಿಸೂಚನೆ ಆಗಸ್ಟ್ 22ರಂದು ಪ್ರಕಟಗೊಂಡಿತ್ತು.
- ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಆಗಸ್ಟ್ 28ರಿಂದ ಅವಕಾಶ ನೀಡಲಾಗುವುದು ಎಂದು ಹೇಳಲಾಗಿತ್ತು.
- ಆದರೆ ತಾಂತ್ರಿಕ ಕಾರಣದಿಂದಾಗಿ ಅರ್ಜಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಲಾಯಿತು.
- ಈಗ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗದೆ ಐದು ದಿನಗಳಿಂದ ಅಭ್ಯರ್ಥಿಗಳು ಕಾಯುತ್ತಿದ್ದಾರೆ.
ಪಠ್ಯಕ್ರಮ ಡೌನ್‌ಲೋಡ್ ವಿವರಗಳು:
- ಕೆ-ಸೆಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು, ವಿಷಯವಾರು ಪಠ್ಯಕ್ರಮವನ್ನು ಕೆಇಎ ಅಧಿಕೃತ ಜಾಲತಾಣದಲ್ಲಿ ಪಿಡಿಎಫ್ ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪರೀಕ್ಷಾರ್ಥಿಗಳಿಗೆ ಸೂಚನೆ:
- ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ‘K-SET Syllabus’ ಲಿಂಕ್‌ನಲ್ಲಿ ಪಿಡಿಎಫ್ ಡೌನ್‌ಲೋಡ್ ಮಾಡಿ.
- ಎಲ್ಲಾ 33 ವಿಷಯಗಳ ಪಠ್ಯಕ್ರಮ ಲಭ್ಯವಿದೆ.
- ತಯಾರಿಯ ಸಮಯದಲ್ಲಿ ಅಧಿಕೃತ ಪಠ್ಯಕ್ರಮವನ್ನೇ ಆಧಾರವನ್ನಾಗಿ ಮಾಡಿಕೊಂಡು ಅಭ್ಯಾಸ ಮಾಡುವುದು ಮಹತ್ವದ್ದು.
ಅಭ್ಯರ್ಥಿಗಳು ತಮ್ಮ ಆಯ್ಕೆ ಮಾಡಿದ ವಿಷಯಗಳಿಗೆ ಹೊಂದಿಕೊಳ್ಳುವಂತೆ ಸಿಲಬಸ್‌ನ್ನು ಡೌನ್‌ಲೋಡ್ ಮಾಡಿಕೊಂಡು ಅಧ್ಯಯನ ಪ್ರಾರಂಭಿಸಬೇಕು. ವಿವರವಾದ ಮಾಹಿತಿ ಮತ್ತು ಸಿಲಬಸ್ ಪಡೆಯಲು K-SET ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
Comments