ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿನ 50 ಸಹಾಯಕ ಅಭಿಯಂತರರು ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ದಿನಾಂಕ 05/02/2024 ರಂದು ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯನು 18.07.2024, 20.07.2024 ಮತ್ತು 11.08.2024 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆ ಮತ್ತು ಮೀಸಲಾತಿಗಳ ಆಧಾರದ ಮೇಲೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಂತರ, ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಸದರಿ ತಾತ್ಕಲಿಕ ಆಯ್ಕೆ ಪಟ್ಟಿಗೆ ಸಮಂಜಸವಾದ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಪಟ್ಟ ಅರ್ಹ ಅಭ್ಯರ್ಥಿಗಳು ಸೂಕ್ತ ವಿವರ ಹಾಗೂ ದಾಖಲೆಗಳೊಂದಿಗೆ ತಮ್ಮ ಹೆಸರು ಹಾಗೂ ಅರ್ಜಿ ಸಂಖ್ಯೆಯೊಂದಿಗೆ ಖುದ್ದಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಕೊನೆಯ ದಿನಾಂಕ : 02.05.2025.
ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಜಲಭವನ, ನಂ.5 & 6, ಬನ್ನೇರುಘಟ್ಟಿ ರಸ್ತೆ, ಬಿ.ಟಿ.ಎಂ ಮೊದಲನೇ ಹಂತ,ಬೆಂಗಳೂರು-560029.
Comments