Loading..!

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:June 13, 2024
not found

ಆಯುಕ್ತರ ಕಾರ್ಯಾಲಯ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ, ಪಶುಪಾಲನಾ ಭವನ ಸಿ, ಬಿ, ಐ ಕಚೇರಿ ಎದುರು, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು400 ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. 


- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  400
Application Start Date:  June 14, 2024
Application End Date:  June 24, 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ:24/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಬಂಧಪಟ್ಟ ವಿಷಯದಲ್ಲಿ ಬಿ.ವಿ.ಎಸ್ಸಿ / ಬಿ.ವಿ.ಎಸ್ಸಿ & ಎ ಹೆಚ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650/- ರಿಂದ 97,100/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments