ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ರೈಪುರ್ ನಲ್ಲಿ ಖಾಲಿ ಇರುವ 75 ಅನಸ್ಥೇಸಿಯೋಲಾಜಿ, ಬೈಯೋಕ್ಯಾಮೆಟ್ರಿ, ಕಾರ್ಡಿಯಾಲಜಿ, ಬರ್ನ್ಸ್ & ಪ್ಲಾಸ್ಟಿಕ್ ಸರ್ಜರಿ, ಕ್ಲಿನಿಕಲ್ ಹೆಮಟಾಲೋಜಿ, ಜನರಲ್ ಮೆಡಿಸಿನ್, ಕಮ್ಯೂನಿಟಿ ಅಂಡ್ ಫ್ಯಾಮಿಲಿ ಮೆಡಿಸಿನ್ ಮತ್ತು ಫೋರೆನ್ಸಿಕ್ ಮೆಡಿಸಿನ್ ಅಂಡ್ ಟಾಕ್ಸಿಕಾಳೋಜಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಜೂನ್ 2024 ರಂದು ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Committee Room, 1st Floor, Medical College Building,
Gate No.05, AIIMS, Tatibandh, G.E. Road,
Raipur Chhattisgarh- 492099
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MD/ MS/ DNB/ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
UR/EWS/OBC ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 67,700/- ರೂ ಗಳಿಂದ 39,100/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments