ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 220 ಬ್ಲಡ್ ಬ್ಯಾಂಕ್ (ಮೇನ್), ಬ್ಲಡ್ ಬ್ಯಾಂಕ್ (CNC), ಕಾರ್ಡಿಯಾಲಜಿ, ಕಮ್ಯೂನಿಟಿ ಮೆಡಿಸಿನ್, ಎಮರ್ಜೆನ್ಸಿ ಮೆಡಿಸಿನ್, ಲ್ಯಾಬ್.ಮೆಡಿಸಿನ್ ಮತ್ತು ನೆಫ್ರಾಲಜಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MD/ MS/ DNB/ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 56,100/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments