ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 5
ಜಿಲ್ಲಾ ಎಂ.ಐ.ಎಸ್ ಸಂಯೋಜಕರು - 01
ತಾಂತ್ರಿಕ ಸಹಾಯಕರು - 02
ತಾಂತ್ರಿಕ ಸಹಾಯಕರು (ಅರಣ್ಯ) - 01
ತಾಂತ್ರಿಕ ಸಹಾಯಕರು (ಕೃಷಿ) - 01
- ಈ ಹುದ್ದೆಗಳಿಗೆ ಅರ್ಜಿಯನ್ನ https://zpbengaluruurban.karnataka.gov.in ವೆಬ್ ಸೈಟ್ ನಿಂದ ಡಾನ್ ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ 2-07-2024 ರಂದು ಸಂಜೆ 5.30 ಗಂಟೆಯೊಳಗೆ ಟಪಾಲು ಶಾಖೆಗೆ ಖುದ್ದಾಗಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ,
ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು 560070.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.sc/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
ಜಿಲ್ಲಾ ಎಂ.ಐ.ಎಸ್ ಸಂಯೋಜಕರು - 34,000/-
ತಾಂತ್ರಿಕ ಸಹಾಯಕರು - 26,000/-
ತಾಂತ್ರಿಕ ಸಹಾಯಕರು (ಅರಣ್ಯ) - 28,000/-
ತಾಂತ್ರಿಕ ಸಹಾಯಕರು (ಕೃಷಿ) - 28,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments