ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 11,307 ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 11,307 ಪೌರಕಾರ್ಮಿಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳಲ್ಲಿ 905 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೂ ಮೀಸಲಿಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15 ಮೇ 2024 ರಂದು ಸಂಜೆ 05:30 ಗಂಟೆಯೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 11,307
ಪೌರಕಾರ್ಮಿಕ (KK) - 905
ಪೌರಕಾರ್ಮಿಕ (RPC) - 10402
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು. ಯಾವುದೇ ವಿದ್ಯಾರ್ಹತೆ ನಿಗದಿಪಡಿಸಲಾಗಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.17,000- 28,950/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments