ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 231 ಕಂಟೆಂಟ್ ಆಡಿಟರ್, ಸೀನಿಯರ್ ಮಾನಿಟರ್, ಎಕ್ಸಿಕ್ಯುಟಿವ್ ಅಸಿಸ್ಟೆಂಟ್, ಲಾಜಿಸ್ಟಿಕ್ ಅಸಿಸ್ಟೆಂಟ್, ಸೀನಿಯರ್ ಶಿಫ್ಟ್ ಮ್ಯಾನೇಜರ್, ಶಿಫ್ಟ್ ಮ್ಯಾನೇಜರ್ ಮತ್ತು ಮಾನಿಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24 ಜೂನ್ 2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 231
ಕಂಟೆಂಟ್ ಆಡಿಟರ್ - 07
ಸೀನಿಯರ್ ಮಾನಿಟರ್ - 20
ಎಸ್ಎಕ್ಯುಟಿವ್ ಅಸಿಸ್ಟೆಂಟ್ - 05
ಮಾನಿಟರ್ - 165
ಲಾಜಿಸ್ಟಿಕ್ ಅಸಿಸ್ಟೆಂಟ್ - 08
ಮೆಸ್ಸೆಂಜರ್/ ಜವಾನ್ - 13
ಸೀನಿಯರ್ ಶಿಫ್ಟ್ ಮ್ಯಾನೇಜರ್ - 01
ಶಿಫ್ಟ್ ಮ್ಯಾನೇಜರ್ - 03
ಸಿಸ್ಟಮ್ ಟೆಚ್ನಿಷಿಯನ್ - 09
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 8th/ SSLC/ PUC/ Dilpoma ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 885/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 19,279/- ರೂ ಗಳಿಂದ 59,760/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments