ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ |ಈ ಕುರಿತು ಮಾಹಿತಿ ನಿಮಗಾಗಿ

ಬೆಳಗಾವಿ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 41 ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರ, ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ14/03/2024 ಹಾಗೂ ಕೊನೆಯ ದಿನಾಂಕ 14 ಏಪ್ರಿಲ್ 2024 ರಾತ್ರಿ : 11.59 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 41
ಶೀಘ್ರಲಿಪಿಗಾರರು ಗ್ರೇಡ್-III - 05
ಬೆರಳಚ್ಚುಗಾರ - 01
ಆದೇಶ ಜಾರಿಕಾರರು - 02
ಸಿಪಾಯಿಗಳು - 33
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಹಾಗೂ ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಸ್ಟೆನೋಗ್ರಾಫರ್ ಗ್ರೇಡ್-III, ಬೆರಳಚ್ಚುಗಾರ ಹುದ್ದೆಗಳಿಗೆ :
- ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
* ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
* ಸ್ಟೆನೋಗ್ರಾಫರ್ ಗ್ರೇಡ್-III, ಬೆರಳಚ್ಚುಗಾರ ಹುದ್ದೆಗಳಿಗೆ :
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 300/ -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
* ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ :
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 250/ -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಶೀಘ್ರಲಿಪಿಗಾರರು ಗ್ರೇಡ್-III ಹುದ್ದೆಗಳಿಗೆ - 27,650/- 52,650/-
ಬೆರಳಚ್ಚುಗಾರ ಹುದ್ದೆಗಳಿಗೆ - 21,400/- 42,000/-
ಆದೇಶ ಜಾರಿಕಾರರು ಹುದ್ದೆಗಳಿಗೆ - 19,950/- 37,900/-
ಸಿಪಾಯಿಗಳು ಹುದ್ದೆಗಳಿಗೆ - 17,000/- 28,950/- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments