ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ(BSF) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 141 ಸ್ಟಾಪ್ ನರ್ಸ್, ಮೆಕ್ಯಾನಿಕ್ ವೆಹಿಕಲ್, ಪೈಕಿ ಲ್ಯಾಬ್ ಟೆಕ್ನಲಾಜಿ ಮತ್ತು ಫಿಸಿಯೋಥೆರಪಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 141
ಸ್ಟಾಪ್ ನರ್ಸ್ - 14
ಗ್ರೂಪ್ ಬಿ (ಮೆಕ್ಯಾನಿಕ್ ವೆಹಿಕಲ್) - 03
ಪೈಕಿ ಲ್ಯಾಬ್ ಟೆಕ್ನಲಾಜಿ ಮತ್ತು ಫಿಸಿಯೋಥೆರಪಿ - 85
ಗ್ರೂಪ್ ಬಿ - 34
ವೆಟರ್ನರಿ ಸ್ಟಾಪ್ - 03
ಇನ್ಸ್ ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೆಬಲ್ (ಗ್ರೂಪ್ ಬಿ) - 02
ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 141 ಹುದ್ದೆಗಳಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 16 ಜುಲೈ 2024 ರ ವರೆಗೆ ನಿಗದಿಪಡಿಸಲಾಗಿತ್ತು. ಇದೀಗ 25 ಜುಲೈ 2024 ವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 21,700/- ರೂಗಳಿಂದ 1,42,400/- ಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments