ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:May 29, 2024

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 34 ಸೇಫ್ಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-06-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 34
Application Start Date: May 29, 2024
Application End Date: June 11, 2024
Work Location: ಭಾರತದಾದ್ಯಂತ
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSLC/ Diploma ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 1ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗು ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗತ್ತದೆ.
First year : ₹ 23300/-
Second year : ₹ 24000/-
Third year : ₹ 24800/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments