ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ122 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ,
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,100/- ರಿಂದ 1,77,500/- ವೇತನವನ್ನು ನೀಡಲಾಗುವುದು
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments