ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 49 ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಮತ್ತು ರಿಕವರಿ ಆಫೀಸರ್ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಅಧೀನ ಕಾರ್ಯದರ್ಶಿ (DRT), ಹಣಕಾಸು ಸಚಿವಾಲಯ,
ಹಣಕಾಸು ಸೇವೆಗಳ ಇಲಾಖೆ, 3ನೇ ಮಹಡಿ,
ಜೀವನ್ ಡೀಪ್ ಬಿಲ್ಡಿಂಗ್, 10, ಪಾರ್ಲಿಮೆಂಟ್ ಸ್ಟ್ರೀಟ್, ನವದೆಹಲಿ-110001
ಹುದ್ದೆಗಳ ವಿವರ : 49
ರಿಜಿಸ್ಟ್ರಾರ್ - 18
ಸಹಾಯಕ ರಿಜಿಸ್ಟ್ರಾರ್ - 10
ರಿಕವರಿ ಆಫೀಸರ್ - 21
ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ರಿಜಿಸ್ಟ್ರಾರ್ ಹುದ್ದೆಗಳಿಗೆ - 78800/- ರೂ ಗಳಿಂದ 209200/-
ಸಹಾಯಕ ರಿಜಿಸ್ಟ್ರಾರ್ ಮತ್ತು ರಿಕವರಿ ಆಫೀಸರ್ ಹುದ್ದೆಗಳಿಗೆ - 67700/- ರೂ ಗಳಿಂದ 208700/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments