ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿಯನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಯಾದಗಿರಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕಾಲೇಜಿನ ಪ್ರಾಚಾರ್ಯರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.14 ಕೊನೆ ದಿನವಾಗಿದೆ.
- ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ವಿಶೇಷ ಶಿಕ್ಷಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆಸಕ್ತರುಜೂ.18ರೊಳಗೆ ಉಪಯೋಜನಾ ಸಮನ್ವಯಾ ಧಿಕಾರಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
- ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲಾ ಶಿಕ್ಷಣ ಇಲಾಖೆಯ ಸಮನ್ವಯ ಕಾರತಂತ್ರದಡಿ 2024-25ನೇ ಸಲಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಹುದ್ದೆಗಳಿಗೆ ಗುತ್ತಿಗೆಯಾಧರಿತವಾಗಿ ಬಿಐಇಆರ್‌ಟಿಗಳ ಸೇವೆಯನ್ನು ಪಡೆಯಲು ತಾಲೂಕುವಾರು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಸಮನ್ವಯ ಶಿಕ್ಷಣದಲ್ಲಿ ಪ್ರಾಥಮಿಕ ವಿಭಾಗಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಜೂ.15ರೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments