Loading..!

ಅಗ್ನಿಪಥ ಯೋಜನೆಯ ಭೂಸೇನೆ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:June 22, 2022
not found

ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ ಅಗ್ನಿವೀರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಭೂಸೇನೆ ಅಗ್ನಿವೀರರ ನೇಮಕಾತಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ  ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ 


ಹುದ್ದೆಗಳ ವಿವರ : 
- ಅಗ್ನಿವೀರ್ ಜೆನೆರಲ್ ಡ್ಯೂಟಿ
- ಅಗ್ನಿವೀರ್ ಟೆಕ್ನಿಕಲ್ (ಏವಿಯೇಷನ್ / ಅಮ್ಯುನಿಷನ್ ಎಕ್ಸಾಮಿನರ್)
- ಅಗ್ನಿವೀರ್ ಕ್ಲರ್ಕ್
- ಅಗ್ನಿವೀರ್ ಸ್ಟೋರ್ ಕೀಪರ್ ಟೆಕ್ನಿಕಲ್
- ಅಗ್ನಿವೀರ್ ಟ್ರೇಡ್ಸ್‌ಮನ್

Application Start Date:  July 1, 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 8th, SSLC, PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User June 22, 2022, 8:25 p.m.
User June 23, 2022, 2:09 p.m.
User June 23, 2022, 5:01 p.m.
Avinash Hosmani June 24, 2022, 10:30 a.m.
Kiran Kiran Kv July 1, 2022, 11:56 a.m.
Praveen Arer July 2, 2022, 12:50 p.m.
Subhash H. A July 5, 2022, 11:47 a.m.