Loading..!

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:April 30, 2022
not found

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು 77 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/05/2022 ಸಂಜೆ 4 ಗಂಟೆಯೊಳಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು.


ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
 ಒಟ್ಟು ಹುದ್ದೆಗಳ ವಿವರ : 77
* ಕನ್ನಡ ವರದಿಗಾರರು/ ಆಂಗ್ಲ ವರದಿಗಾರರು - 05
* ಶೀಘ್ರಲಿಪಿಗಾರರು - 02
* ಕಿರಿಯ ಸಹಾಯಕ - 13 
* ಕಂಪ್ಯೂಟರ್ ಆಪರೇಟರ್ - 04 
* ಬೆರಳಚ್ಚುಗಾರ - 04
* ಸ್ವಾಗತಕಾರರು - 01
*  ಬಡಗಿ - 01
* ವಾಹನ ಚಾಲಕರು - 08
* ದಲಾಯತ್ - 37
* ಸ್ವೀಪರ್ - 02


ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ : 5074, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.

No. of posts:  77
Application Start Date:  April 29, 2022
Application End Date:  May 27, 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಅಥವಾ ಇವೆರಡನ್ನೂ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ 4ನೇ ತರಗತಿ,  7ನೇ ತರಗತಿ, SSLC/ITI/ BCA/ B.Sc ಪದವಿ ಪಡೆದಿರಬೇಕು.
* ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.  

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ಹೊಂದಿರಬೇಕು 
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000/- ರಿಂದ 70,850/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Bhagya Shree T April 29, 2022, 8:07 p.m.
Sachin N Kurennavar May 7, 2022, 11:17 a.m.
User May 20, 2022, 9:29 a.m.
User May 20, 2022, 9:29 a.m.
User May 22, 2022, 7 a.m.
User Feb. 27, 2024, 3:22 p.m.