ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/07/2024 ರಂದು ಬೆಳ್ಳಿಗೆ 11:00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕಾರ್ಯಪಾಲಕ ಅಭಿಯಂತರರು, ನಂ. 3ನೇ ವಿಭಾಗ, ನಂ. 55, ನೆಲಮಹಡಿ,
ಅಭಯ ಸಂಕೀರ್ಣ ಭವನ, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-560020.
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments