Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಾದ್ಯಗಾರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:April 14, 2022
not found

ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು ಇಲ್ಲಿ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರ ಹಾಗೂ ಕರ್ನಾಟಕ ವಾದ್ಯಗಾರರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/04/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 02
* Tenor Trombone - 01
* Bass Trombone - 01
ಅರ್ಜಿಯನ್ನು ಸಲ್ಲಿಸುವ ವಿಳಾಸ:  
ಕಮಾಂಡೆಂಟ್, ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಲಲಿತ ಮಹಲ್ ರಸ್ತೆ, ಮೈಸೂರು 570011


No. of posts:  2
Application Start Date:  April 13, 2022
Application End Date:  April 16, 2022
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಲಂಡನ್ ನ ಟ್ರಿನಿಟಿ ಸಂಗೀತ ಕಾಲೇಜು ನ ಲೆಂಟಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 
ಹಾಗೂ ಎಲ್ಲಾ ರೀತಿಯ ದೊಡ್ಡ ಪ್ರಮಾಣದ ಸಣ್ಣ ಪ್ರಮಾಣದ ಮತ್ತು ಕ್ರೊಮ್ಯಾಟಿಕ್ ಸ್ಕೇಲ್ ನ   ವಾದ್ಯಗಳ ಬಗ್ಗೆ ತಿಳುವಳಿಕೆ ಇರಬೇಕು ಹಾಗೂ ವಾದ್ಯೋಪಕರಣಗಳನ್ನು ಆ ಕ್ಷಣವೇ ಸರಾಗವಾಗಿ ನುಡಿಸುವ ಸಾಮರ್ಥ್ಯವಿರಬೇಕು

Fee:

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/- 

Age Limit:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 16/04/2022ಕ್ಕೆ ಪುರುಷ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. 30 ವರ್ಷಗಳನ್ನೂ ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments