Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:March 31, 2022
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ 76 ಸಹಾಯಕ ಅಭಿಯಂತಕರು, ಕಿರಿಯ ಅಭಿಯಂತಕರು,ಪ್ರಾಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 20/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 76
* ಸಹಾಯಕ ಅಭಿಯಂತಕರು - 43
* ಕಿರಿಯ ಅಭಿಯಂತಕರು  - 18
* ಪ್ರಥಮ ದರ್ಜೆ ಸಹಾಯಕರು : 05
* ದ್ವಿತೀಯ ದರ್ಜೆ ಸಹಾಯಕರು : 10
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 28/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 22/04/202

No. of posts:  76
Application Start Date:  March 28, 2022
Application End Date:  April 20, 2022
Last Date for Payment:  April 22, 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ  ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ PUC/ ಪದವಿ/ ಇಂಜಿನಿಯರಿಂಗ್ ಪದವಿಯನ್ನು ವಿವಿಧ ವಿಭಾಗಗಲ್ಲಿ ಅಭ್ಯಸಿಸಿರಬೇಕು.

ಈ ಕುರಿತು ವಿವರವನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು   

* ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹750/-

* SC / ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹375/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಮಾಸಿಕ ರೂ. 21,400 ರಿಂದ 83,900/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Press Notification
To Download Detailed Official Notification

Comments

User April 8, 2022, 9:05 p.m.