Loading..!

KEAಯಿಂದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:June 18, 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಲೆಕ್ಚರ್, ಇಂಜಿನಿಯರ್, ಆಫೀಸ್ ಗ್ರೇಡ್-II, ಅಸಿಸ್ಟಂಟ್ ಗ್ರೇಡ್-II, ಟೆಕ್ನಿಷಿಯನ್ ಗ್ರೇಡ್-IV ಮತ್ತು ಇನ್ ಸ್ಪೆಕ್ಟರ್ ಗ್ರೇಡ್-II ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.


ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15/06/2024 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ 29/06/2024 ವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 01/07/2024.

No. of posts:  98
Application Start Date:  May 16, 2024
Application End Date:  June 29, 2024
Last Date for Payment:  July 1, 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 16/05/2024 ರಿಂದ ಪ್ರಾರಂಭಗೊಂಡು ದಿನಾಂಕ15/06/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. 


ಹುದ್ದೆಗಳ ವಿವರ : 98 
Lecturer (Engineering) : 30
Engineer : 2
Officer Grade-II : 2
Foreman Grade-II : 4
Instructor Grade-I : 15
Technician Grade-II : 8
Instructor Grade-II : 5
Technician Grade-III : 23
Technician Grade-IV : 4
Assistant Grade-II : 5


 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma, ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750/- 
SC/ ST/ ಮಾಜಿ ಸೈನಿಕರು : 500/- 
ಅಂಗವಿಕಲ ಅಭ್ಯರ್ಥಿಗಳಿಗೆ : 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification
To Download the official notification for date Extended

Comments

User June 24, 2024, 12:45 p.m.