Loading..!

ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:July 24, 2019
not found
ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಒಟ್ಟು 06 ಶೀಘ್ರಲಿಪಿಕಾರ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 31-07-2019 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬೇಕು.
No. of posts:  6
Application Start Date:  July 9, 2019
Application End Date:  July 31, 2019
Last Date for Payment:  Aug. 2, 2019
Work Location:  ಕೊಪ್ಪಳ ಜಿಲ್ಲಾ ನ್ಯಾಯಾಲಯ ಮತ್ತು ಅಧೀನ ನ್ಯಾಯಾಲಯ
Selection Procedure: ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡವಾರುವಿನ ಮೊತ್ತದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
Qualification: -ಪದವಿ ಪೂರ್ವ ಪರೀಕ್ಷಾ ಮಂಡಳಿಯು ನಡೆಸುವ ಪಿ ಯು ಸಿ (PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.
Fee: * ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಪ.ಜಾ /ಪ.ಪ/ಪ್ರ-1 : 40 ವರ್ಷ
- ಪ್ರ ವರ್ಗ || (ಎ) ,||( ಬಿ), |||(ಎ), |||(ಬಿ) -38 ವರ್ಷ
- ಸಾಮಾನ್ಯ ಅರ್ಹತೆ - 35 ವರ್ಷ
Pay Scale: ರೂ.27650/- ರಿಂದ ರೂ. 52650/- ಮತ್ತು ಇತರೆ ಭತ್ಯೆಗಳು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments