Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Savita Halli | Date:March 8, 2022
not found

ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ 'ಎ' ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. 
ಹುದ್ದೆಗಳ ವಿವರ: 
ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ  ಪ್ರಯೋಗಾಲಯಗಳಲ್ಲಿ
* ವಿಷವಿಜ್ಞಾನ ವಿಭಾಗ - 02 & ಹೈ.ಕ - 01
* ಜೀವಶಾಸ್ತ್ರ ವಿಭಾಗ - 02
* ಡಿಎನ್ ಎ ವಿಭಾಗ - 01
* ರಸಾಯನಿಕ ವಿಭಾಗ - 02
* ಪ್ರಶ್ನಿತ ದಸ್ತಾವೇಜು ವಿಭಾಗ - 01 
ಒಟ್ಟು ಹುದ್ದೆಗಳು : 10

No. of posts:  10
Application Start Date:  March 16, 2022
Application End Date:  April 18, 2022
Last Date for Payment:  April 19, 2022
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Fee:

* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹600/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50/-
* SC / ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 52650 - 97100 ರವರೆಗೆ ವೇತನ ಪಡೆಯಲಿದ್ದಾರೆ.
To Download Official Notification : KPSC New Recruitment for Police Dept 2022

Comments

Preetham Bt March 11, 2022, 10:38 p.m.