ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (KPSC) ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 76 (HK- 6, RPC- 70) ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 30 ಮೇ 2024 ರಿಂದ ಆರಂಭಗೊಂಡು ದಿನಾಂಕ 30 ಜೂನ್ 2024 ರೊಳಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC / Diploma / ಇಂಜಿನಿಯರಿಂಗ್‌ನಲ್ಲಿ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-ರೂ ಗಳಿಂದ 62,600/- ರೂ ಗಾಲ ವರೆಗೆ ಮಾಸಿಕ ವೇತನ ನೀಡಲಾಗುವದು. -
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments