ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಸಚಿವಾಲಯ ಮತ್ತು ಕರ್ನಾಕಟ ಸರಕಾರದ ಜಂಟಿ ಉದ್ಯಮವಾಗಿರುವ ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ 18 ಪ್ರಧಾನ ವ್ಯವಸ್ಥಾಪಕರು, ಹೆಚ್ಚುವರಿ ಜನರಲ್ ಮ್ಯಾನೇಜರ್/ಜಾಯಿಂಟ್ ಜನರಲ್ ಮ್ಯಾನೇಜರ್, ಮತ್ತು ಮ್ಯಾನೇಜರ್/ ಡೆಪ್ಯೂಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18 ಜುಲೈ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 18
ಪ್ರಧಾನ ವ್ಯವಸ್ಥಾಪಕರು - 2
ಹೆಚ್ಚುವರಿ ಜನರಲ್ ಮ್ಯಾನೇಜರ್/ಜಾಯಿಂಟ್ ಜನರಲ್ ಮ್ಯಾನೇಜರ್ - 4
ಮ್ಯಾನೇಜರ್/ ಡೆಪ್ಯೂಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್ - 4
ಹಿರಿಯ ಕಾರ್ಯನಿರ್ವಾಹಕ / ಕಾರ್ಯನಿರ್ವಾಹಕ - 8
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech / M.Tech, MCA / ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 30,000/- ರೂ ಗಳಿಂದ 2,61,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments