ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಜುಲೈ 2024 ರ ಸಂಜೆ 5:30 ಗಂಟೆಯೊಳಗೆ ನೇರವಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ನಮೂನೆಯನ್ನು ಪಡೆಯುವ ವಿಳಾಸ :
ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ,
ಸಯ್ಯಾಜಿರಾವ್ ರಸ್ತೆ, ಮೈಸೂರು - 570004
- ಈ ಹುದ್ದೆಗಳಿಗನುಗುಣವಾಗಿ ಯಾವುದೇ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.
- ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ-18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ-55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 17,000/- ರೂ ಗಳಿಂದ 28,950/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments