ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ 74 ಪ್ರಾಜೆಕ್ಟ್ ಅಸೋಸಿಯೇಟ್-I, ಪ್ರಾಜೆಕ್ಟ್ ಅಸೋಸಿಯೇಟ್-II, ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಯೋಜನೆಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ04 ಜುಲೈ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ
ಹುದ್ದೆಗಳ ವಿವರ : 74
ಪ್ರಾಜೆಕ್ಟ್ ಅಸೋಸಿಯೇಟ್-I - 27
ಪ್ರಾಜೆಕ್ಟ್ ಅಸೋಸಿಯೇಟ್-II - 33
ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್ - 04
ಯೋಜನೆಯ ಸಹಾಯಕ - 10
ಅರ್ಜಿ ಸಲ್ಲಿಸುವ ವಿಳಾಸ :
CSIR-NAL, RAB Meeting Complex,
National Aerospace Laboratories [NAL], Adjacent to SBI,
NAL Branch, Kodihalli, Bengaluru – 560017
- ಸಂದರ್ಶನ ನಡೆಯುವ ದಿನಾಂಕ: 25, 26 ಮತ್ತು 28. ಜೂನ್ 2024, ಹಾಗೂ 01, 02 ಮತ್ತು 04. ಜುಲೈ 2024.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ Diploma/ BCA, B.Sc, BE / B.Tech, ME/ M.Tech, M.Sc, MS, Ph.D ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000/- ರಿಂದ 42,000/- ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments