ನವೋದಯ ವಿದ್ಯಾಲಯ ಸಮಿತಿ ಇಲ್ಲಿ ಖಾಲಿ ಇರುವ 1377 ಬೋಧಕೇತರ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೆ ಅರ್ಜಿ ಸಲ್ಲಿಸಿ

ನವೋದಯ ವಿದ್ಯಾಲಯ ಸಮಿತಿ (NVS) ದಲ್ಲಿ ಖಾಲಿ ಇರುವ 1377 ಮೆಸ್ ಸಹಾಯಕ, ಸ್ಟೆನೋಗ್ರಾಫರ್, ಮಹಿಳಾ ಸಿಬ್ಬಂದಿ ನರ್ಸ್, ಅಡಿಟ್ ಸಹಾಯಕ, ಕಾನೂನು ಸಹಾಯಕ, ಅಡುಗೆ ಮೇಲ್ವಿಚಾರಕ, ಲ್ಯಾಬ್ ಅಟೆಂಡೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.
ಹುದ್ದೆಗಳ ವಿವರ : 1377
ಮಹಿಳಾ ಸಿಬ್ಬಂದಿ ನರ್ಸ್ (Group B) - 121
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (Group B) - 05
ಆಡಿಟ್ ಅಸಿಸ್ಟೆಂಟ್ (Group B) - 12
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ (Group B) - 04
ಲೀಗಲ್ ಅಸಿಸ್ಟೆಂಟ್ (Group B) - 01
ಸ್ಟೆನೋಗ್ರಾಫ್ರ್ (Group C) - 23
ಕಂಪ್ಯೂಟರ್ ಆಪರೇಟರ್ (Group C) - 02
ಕೇಟರಿಂಗ್ ಸೂಪರ್ ವೈಸರ್ (Group C) - 78
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (Group C) - 381
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್(Group C) - 128
ಲ್ಯಾಬ್ ಅಟೆಂಡೆಂಟ್ (Group C) - 161
ಮೆಸ್ಸ್ ಸಹಾಯಕ (Group C) - 442
ಮಲ್ಟಿ ಟಾಸ್ಕಿಂಗ್ ಸ್ಟಾಫ್ (Group C) - 19
- ನವೋದಯ ವಿದ್ಯಾಲಯ ಸಮಿತಿ (NVS) ದಲ್ಲಿ ಖಾಲಿ ಇರುವ 1377 ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 14 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿSSLC/ PUC/ M.Sc/ BCA/ MCA/ M.tech/ ME/ B.ED/ B.SC/ BE/ B.Tech/ ಯಾವುದೇ ಪದವಿ ಹಾಗು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಹಾಗೂ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು
* SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500/- ರೂ
* ಮಹಿಳಾ ಸಿಬ್ಬಂದಿ ನರ್ಸ್ ಹುದ್ದೆಗೆ ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ 1,500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಉಳಿದ ಹುದ್ದೆಗೆ ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ : 1,000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments