ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಕಾನ್ಸಲ್ ಟಂಟ್ MH, ಕಾನ್ಸಲ್ ಟಂಟ್ NUMH, ಚೈಲ್ಡ್ ಹೆಲ್ತ್ ಅಡ್ವಿಸರ್, PIP ಕಾನ್ಸಲ್ ಟಂಟ್ ಮತ್ತು ಕೋ-ಆರ್ಡಿನೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19 ಜೂನ್ 2024 ರಂದು ಬೆಳಗ್ಗೆ 11.00 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
- ಮುಖ್ಯ ಆಡಳಿತಾಧಿಕಾರಿ, ರಾಷ್ಟ್ರೀಯ ಅರೋಗ್ಯ ಅಭಿಯಾನ ಕಚೇರಿ 1 ನೇ ಮಹಡಿ,
ಪಶ್ಚಿಮ ವಿಭಾಗ, ಅರೋಗ್ಯ ಸೌದ, ಮಾಗಡಿ ರಸ್ತೆ,
1 ನೇ ಕ್ರಾಸ್ ಬೆಂಗಳೂರು - 560023
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments