ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 02 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ಹಿರಿಯ ಸಂಶೋಧನಾ ಫೆಲೋ (SRF) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/04/2024 ರಂದು ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಸಲ್ಲಿಸುವ ವಿಧಾನ :
ಇ ಮೇಲ್ ವಿಳಾಸ:
dhavalshukla@nimhans.ac.in
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮನೋವೈದ್ಯಶಾಸ್ತ್ರದಲ್ಲಿ BE, ME, M.Sc, MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ 31,000/- 35,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments